ಬೆಂಗಳೂರು: ಬ್ಯಾಟರಾಯನಪುರ ಪೊಲೀಸರು ಅಕ್ಬರ್ ಶರೀಫ್ ಎಂಬ ಡ್ರಗ್ ಪೆಡ್ಲರ್‌ನನ್ನು ಬಂಧಿಸಿ, ಆತನಿಂದ 17 ಮಾರಕಾಸ್ತ್ರಗಳು, 230 ಆಂಡ್ರಾಯ್ಡ್ ಮೊಬೈಲ್‌ಗಳು ಹಾಗೂ 700 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ತಡರಾತ್ರಿ ಅನುಮಾನಾಸ್ಪದವಾಗಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಆತನನ್ನು ತಡೆದು ಪರಿಶೀಲಿಸಿದಾಗ ಆಯುಧಗಳು ಪತ್ತೆಯಾಗಿದ್ದು, ಬಳಿಕ ಮನೆ ಮೇಲೆ ದಾಳಿ ನಡೆಸಿದಾಗ ಮತ್ತಷ್ಟು ವಸ್ತುಗಳು ಸಿಕ್ಕಿವೆ. ವಿಚಾರಣೆ ವೇಳೆ ಗಾಂಜಾ ಮಾರಾಟದ ವೇಳೆ ರಕ್ಷಣೆಗಾಗಿ ಆಯುಧಗಳನ್ನು ಇಟ್ಟುಕೊಂಡಿದ್ದಾಗಿ ಆರೋಪಿ ಹೇಳಿದ್ದಾನೆ. ವಶಪಡಿಸಿಕೊಂಡಿರುವ 230 ಮೊಬೈಲ್‌ಗಳು ಕಳ್ಳತನದವೆಯೇ ಅಥವಾ ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದ್ದೇ ಎಂಬ ಬಗ್ಗೆ ಸಿಸಿಬಿ ಸಹಕಾರದೊಂದಿಗೆ ತನಿಖೆ ಮುಂದುವರಿದಿದೆ. ಈ ಕುರಿತು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್ ಮಾಹಿತಿ ನೀಡಿದ್ದು, ಆರೋಪಿ ತಾಯಿ ಮೆಹರ್ ಉನ್ನಿಸಾ ಕೂಡ ಈ ಹಿಂದೆ ಗಾಂಜಾ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಳು ಎಂದು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

