ಉತ್ತರ ಪ್ರದೇಶದ ಆಗ್ರಾದಲ್ಲಿ ಪತಿಯನ್ನು ಕೊಲೆ ಮಾಡಿ ಮನೆಯ ಬಾತ್‌ರೂಂ ನೆಲದಡಿ ಶವವನ್ನು ಹೂತ ಆರೋಪದ ಮೇಲೆ ಪತ್ನಿ ರೂಬಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 45 ದಿನಗಳಿಂದ ನಾಪತ್ತೆಯಾಗಿದ್ದ ಸುರೇಂದ್ರ ಶರ್ಮಾ ಅವರ ಶವವನ್ನು ಮನೆಯ ಬಾತ್‌ರೂಂ ನೆಲ ಅಗೆದು ಹೊರತೆಗೆಯಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಪತಿಗೆ ನಿದ್ರೆ ಮಾತ್ರೆ ಬೆರೆಸಿದ ಆಹಾರ ನೀಡಿ ಪ್ರಜ್ಞೆ ತಪ್ಪಿಸಿದ ಬಳಿಕ ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಬಳಿಕ ಬಾತ್‌ರೂಂನಲ್ಲಿ ಗುಂಡಿ ತೋಡಿ ಶವವನ್ನು ಹೂತು ಸಿಮೆಂಟ್ ಹಾಕಿ ಮುಚ್ಚಲಾಗಿದೆ ಎನ್ನಲಾಗಿದೆ. ವಿಚಾರಣೆ ವೇಳೆ ಆರೋಪಿ ಕೊಲೆ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣದಲ್ಲಿ ಇತರರ ಪಾತ್ರವಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

