ಬೆಂಗಳೂರು: ಪಾರ್ಟಿ ಮಾಡುವ ನೆಪದಲ್ಲಿ ಯುವತಿಯನ್ನು ಕರೆಸಿಕೊಂಡು ಅತ್ಯಾಚಾರ ಎಸಗಿದ ಆರೋಪದ ಮೇಲೆ ತಲಘಟ್ಟಪುರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಯುವತಿಗೆ ಮೊದಲೇ ಪರಿಚಿತರಾಗಿದ್ದು, ಸೋಮಶೇಖರ್ ಎಂಬಾತ ಸ್ನೇಹಿತರನ್ನು ಭೇಟಿಯಾಗುವ ನೆಪದಲ್ಲಿ ಕರೆಸಿಕೊಂಡಿದ್ದಾನೆ ಎನ್ನಲಾಗಿದೆ. ಪಾರ್ಟಿ ವೇಳೆ ಅಂಬರೀಶ ಎಂಬಾತ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವತಿಯನ್ನು ರಕ್ಷಿಸಿ, ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಸೋಮಶೇಖರ್, ಅಂಬರೀಶ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

