Breaking News

ಪ್ರೀತಿ ನಿರಾಕರಿಸಿದ ಅಪ್ರಾಪ್ತೆ ಮೇಲೆ ಆಟದ ಮೈದಾನದಲ್ಲೇ ಹಲ್ಲೆ ನಡೆಸಿದ ತಿಕ್ಕಲು ಪ್ರೇಮಿ!

ಚಿಕ್ಕಮಗಳೂರು ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರೀತಿ ನಿರಾಕರಿಸಿದ ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿ ಕಾಲಿನಿಂದ ತುಳಿದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬಾಣಾವರ ಮೂಲದ ಪುನೀತ್ ಎಂಬಾತ ಬಾಲಕಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಕ್ರೀಡಾಂಗಣದಲ್ಲಿ ಮತ್ತೆ ಪ್ರೀತಿಸುವಂತೆ ಒತ್ತಾಯಿಸಿದಾಗ ಬಾಲಕಿ ನಿರಾಕರಿಸಿದ್ದರಿಂದ ಆಕ್ರೋಶಗೊಂಡು ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿಯ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿ ಆರೋಪಿಯನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *