Breaking News

ಉದ್ಯಮಿಯ ಬ್ಲ್ಯಾಕ್ ಮೇಲ್ ಆರೋಪ: ಮಹಿಳೆಯ ಬಂಧನ

ಉಡುಪಿ: ಅಶ್ಲೀಲ ವಿಡಿಯೋಗಳಿವೆ ಎಂದು ಬೆದರಿಸಿ ಉದ್ಯಮಿಯೊಬ್ಬರಿಂದ ಹಣ ವಸೂಲಿ ಮಾಡಲು ಯತ್ನಿಸಿದ ಆರೋಪದಲ್ಲಿ ಝೀನತ್ ಇಬ್ರಾಹೀಂ ಎಂಬ ಮಹಿಳೆಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದ ನೆಪದಲ್ಲಿ ಉದ್ಯಮಿಯಿಂದ ₹70 ಲಕ್ಷ ಪಡೆದು ದುರ್ಬಳಕೆ ಮಾಡಿದ್ದು, ಬಳಿಕ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಹಾಗೂ ಖಾಸಗಿ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಸಿ ಬ್ಲ್ಯಾಕ್‌ಮೇಲ್ ನಡೆಸಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯದ ಆದೇಶದಂತೆ ಐದು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *