Breaking News

ಒಂದೇ ಕುಟುಂಬದ ಮೂವರು ನೇಣಿಗೆ ಶರಣು!

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಗಾವತಿಯ ಪ್ರಶಾಂತನಗರದ ಮನೆಯಲ್ಲಿ ಪ್ರಕಾಶ್ ರಾಯ್ಕರ್ (54), ಪತ್ನಿ ಪ್ರಭಾ (46) ಹಾಗೂ ಪುತ್ರ ಶಶಾಂಕ್ (21) ಮೃತರಾಗಿದ್ದಾರೆ. ಪ್ರಕಾಶ್ ಜ್ಯುವೆಲ್ಲರಿ ಅಂಗಡಿ ನಡೆಸುತ್ತಿದ್ದು, ಸಾಲಬಾಧೆಯೇ ಆತ್ಮಹತ್ಯೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಪೊಲೀಸರ ಪ್ರಕಾರ, ಬ್ಯಾಂಕ್ ವಶಪಡಿಸಿಕೊಂಡಿದ್ದ ಮನೆಯ ಹಿಂಬಾಗಿಲು ಒಡೆದು ಒಳನುಗ್ಗಿದ ಕುಟುಂಬ ಅಲ್ಲಿಯೇ ನೇಣು ಬಿಗಿದುಕೊಂಡಿದೆ. ಪ್ರಕರಣ ಸಂಬಂಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಸಹೋದರ ನೀಡುವ ದೂರಿನ ಆಧಾರದ ಮೇಲೆ ಮುಂದಿನ ತನಿಖೆ ನಡೆಯಲಿದೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *