Breaking News

ನರೇಗಲ್ ಗಲಾಟೆ: ಬಿಜೆಪಿ ಕಾರ್ಯಕರ್ತ ಮಧುಗೌಡ ಮನೆಯಲ್ಲಿ ಶೌಕತ್ ಅಲಿ ಬಂಧನ

ನರೇಗಲ್ ಗಲಾಟೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಶೌಕತ್ ಅಲಿ ನೆಗಳೂರು ಅವರನ್ನು ಶುಕ್ರವಾರ ರಾತ್ರಿ ಯತ್ನಳ್ಳಿ ಗ್ರಾಮದ ಮಧುಗೌಡ ಪಾಟೀಲ ಅವರ ಮನೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಜೂನ್ 29ರ ಗಲಾಟೆ ಬಳಿಕ ಆತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಶೌಕತ್ ಅಲಿ ಕಳೆದ ಮೂರು ದಿನಗಳಿಂದ ಮಧುಗೌಡ ಅವರ ಮನೆಯಲ್ಲಿ ಆಶ್ರಯ ಪಡೆದಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಪ್ರಕರಣದಲ್ಲಿ ಇದುವರೆಗೆ 8 ಮಂದಿಯನ್ನು ಬಂಧಿಸಲಾಗಿದೆ. ಇದೇ ವೇಳೆ, “ನಾನು ಬಿಜೆಪಿ ಕಾರ್ಯಕರ್ತನಲ್ಲ. ಶೌಕತ್ ಅಲಿ ಅಡಿಕೆ ವ್ಯಾಪಾರದ ಪರಿಚಯದವರಾಗಿದ್ದು, ವ್ಯಾಪಾರದ ವಿಚಾರವಾಗಿ ಮನೆಗೆ ಬಂದಿದ್ದಾಗ ಪೊಲೀಸರು ಬಂಧಿಸಿದ್ದಾರೆ” ಎಂದು ಮಧುಗೌಡ ಪಾಟೀಲ ಸ್ಪಷ್ಟನೆ ನೀಡಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *