Breaking News

ಬಂದೂಕು ಹಿಡಿದು ರೀಲ್ಸ್‌ ಶೋಕಿ – ಮೂವರು ಯುವಕರು ಅಂದರ್..!

ಬಳ್ಳಾರಿ: ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಹಾಗೂ ವೀವ್ಸ್ ಪಡೆಯುವ ಹುಚ್ಚಿನಿಂದ ನಕಲಿ ಬಂದೂಕು ಹಿಡಿದು ರೀಲ್ಸ್ ಮಾಡಿದ ಮೂವರು ಯುವಕರನ್ನು ಬಳ್ಳಾರಿಯ ಕೌಲ್ ಬಜಾರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಾಹಿಲ್, ವಿಕಾಸ್ ಹಾಗೂ ಅಭಿಷೇಕ್ ಎಂದು ಗುರುತಿಸಲಾಗಿದೆ. ಇವರು ನಗರದ ಬಂಡಿಹಟ್ಟಿ ಸಮೀಪದ ಹೆಚ್.ಎಲ್.ಸಿ ಕಾಲುವೆ ಬಳಿ ಸಾರ್ವಜನಿಕರಲ್ಲಿ ಆತಂಕ ಮೂಡಿಸುವ ರೀತಿಯಲ್ಲಿ ನಕಲಿ ಡಬಲ್ ಬ್ಯಾರೆಲ್ ಬಂದೂಕು ಹಾಗೂ ಪಿಸ್ತೂಲ್ ಪ್ರದರ್ಶಿಸಿ ವಿಡಿಯೋ ಚಿತ್ರೀಕರಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ನಕಲಿ ಆಯುಧಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *