ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಚೌಳಹಿರಿಯೂರು ಗ್ರಾಮದಲ್ಲಿ ದುಷ್ಕರ್ಮಿಗಳು ಮೂರು ಹಸುಗಳ ಕಾಲು, ಬಾಲ ಹಾಗೂ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಹಸುಗಳನ್ನು ಕಳ್ಳತನ ಮಾಡಲು ಯತ್ನಿಸಿ ವಿಫಲವಾದ ಬಳಿಕ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಗಾಯಗೊಂಡ ಹಸುಗಳಿಗೆ ಪಶುವೈದ್ಯರಿಂದ ಚಿಕಿತ್ಸೆ ನೀಡಲಾಗಿದ್ದು, ಇತ್ತೀಚೆಗೆ ಈ ಭಾಗದಲ್ಲಿ 50ಕ್ಕೂ ಹೆಚ್ಚು ಜಾನುವಾರುಗಳು ನಾಪತ್ತೆಯಾಗಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆ ಕುರಿತು ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

