Breaking News

ರಾಜ್ಯದಲ್ಲಿ ಹೀನ ಕೃತ್ಯ : ಕಾರವಾರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪ : PSI ಅರೆಸ್ಟ್!

ಉತ್ತರ ಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ವಿರುದ್ಧ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಭಟ್ಕಳ ನಗರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆರೋಪದ ಪ್ರಕಾರ, ಬಾಲಕಿಯನ್ನು ಪುಸಲಾಯಿಸಿ ಭಟ್ಕಳದ ಖಾಸಗಿ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ ಎನ್ನಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೊ ಕಾಯ್ದೆ ಹಾಗೂ ಅತ್ಯಾಚಾರದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕೆಲವೇ ತಿಂಗಳ ಹಿಂದೆ ಮಂಕಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದ ಪಿಎಸ್‌ಐ ವಿರುದ್ಧದ ಈ ಪ್ರಕರಣ ಪೊಲೀಸ್ ಇಲಾಖೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *