Breaking News

ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಸಾರಿಗೆ ಬಸ್ ಚಾಲನೆ; ಚಾಲಕ ಸಸ್ಪೆಂಡ್!

ಕಲಬುರಗಿಯಿಂದ ಚಿಂಚೋಳಿಗೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನ ಹೆಡ್‌ಲೈಟ್ ದೋಷಗೊಂಡಿದ್ದರೂ, ಚಾಲಕ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರಾತ್ರಿ ವೇಳೆ ಬಸ್ ಚಲಾಯಿಸಿದ ಘಟನೆ ಬೆಳಕಿಗೆ ಬಂದಿದೆ. ಬಸ್‌ನಲ್ಲಿ ಪ್ರಯಾಣಿಕರಿದ್ದರೂ ಈ ರೀತಿ ಬಸ್ ಚಾಲನೆ ಮಾಡಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿ ಕೆಕೆಆರ್‌ಟಿಸಿ ಚಾಲಕನನ್ನು ಅಮಾನತುಗೊಳಿಸಿದ್ದು, ಬಸ್‌ ಪರಿಶೀಲನೆ ನಡೆಸದ ಮೆಕ್ಯಾನಿಕಲ್ ವಿಭಾಗದ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *