Breaking News

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ,

ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ…

ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರನ್ನು ಪೋಕ್ಸೊ (POCSO) ಕಾಯ್ದೆಯಡಿ ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಈ ಪ್ರಕರಣ ಪೊಲೀಸ್ ಇಲಾಖೆಯಲ್ಲೇ ತೀವ್ರ ಸಂಚಲನ ಸೃಷ್ಟಿಸಿದೆ…

ಮೂಲದ ಅಪ್ರಾಪ್ತ ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಕಿರುಕುಳದಿಂದ ನೊಂದ ಬಾಲಕಿ ಧೈರ್ಯದಿಂದ ಭಟ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ…

ಆರೋಪಿ ಪೊಲೀಸ್ ಇಲಾಖೆಯ ಅಧಿಕಾರಿಯಾಗಿದ್ದರೂ ಯಾವುದೇ ಒತ್ತಡ ಅಥವಾ ಮುಲಾಜಿಗೆ ಮಣಿಯದೆ ಭಟ್ಕಳ ನಗರ ಠಾಣೆ ಪೊಲೀಸರು ಕಾನೂನು ಕ್ರಮ ಜರುಗಿಸಿ ಪಿಎಸ್‌ಐ ಅವರನ್ನು ಬಂಧಿಸಿದ್ದಾರೆ. ಬಂಧಿತ ಅಧಿಕಾರಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ…

ಕಾನೂನು ಜಾರಿ ಮಾಡುವ ಜವಾಬ್ದಾರಿ ಹೊತ್ತ ಅಧಿಕಾರಿಯ ವಿರುದ್ಧವೇ ಪೋಕ್ಸೊದಂತಹ ಗಂಭೀರ ಆರೋಪ ಕೇಳಿಬಂದಿರುವುದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ಎಲ್ಲ ಆಯಾಮಗಳ ಕುರಿತು ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಸತ್ಯಾಂಶ ಹೊರಬೀಳುವ ನಿರೀಕ್ಷೆ ಇದೆ.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *