ಪಶ್ಚಿಮ ಬಂಗಾಳದ ಹೌರಾ ಜಂಕ್ಷನ್ನಿಂದ ಬೆಂಗಳೂರಿನ ಎಸ್ಎಂವಿಟಿಗೆ ಬರುತ್ತಿದ್ದ ದುರಂತೋ ಎಕ್ಸ್ಪ್ರೆಸ್ ರೈಲಿಗೆ ಹುಸಿ ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲ್ವೇ ಜಂಕ್ಷನ್ನಲ್ಲಿ ತುರ್ತು ಪರಿಶೀಲನೆ ನಡೆಸಲಾಯಿತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸಿಬ್ಬಂದಿ ರೈಲಿನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿ ತಪಾಸಣೆ ನಡೆಸಿದರು. ಈ ವೇಳೆ ರೈಲಿನ ಸಿಬ್ಬಂದಿಯಾಗಿರುವ ಪಶ್ಚಿಮ ಬಂಗಾಳ ಮೂಲದ ಶಶಾಂಕ್ ದೌಲಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಯಾಣಿಕನೊಂದಿಗೆ ಜಗಳದ ಹಿನ್ನೆಲೆಯಲ್ಲಿ ಆತ ಹುಸಿ ಬೆದರಿಕೆ ಹಾಕಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

