Breaking News

ಗಂಗಾವತಿಯಲ್ಲಿ ಬೆಚ್ಚಿಬೀಳಿಸಿದ ಘಟನೆ: ಯುವಕನ ಕೊಲೆ ಮಾಡಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಚಿರ್ಚನಗುಡ್ಡ ತಾಂಡಾ ಸಮೀಪ ಅಪರಿಚಿತ 25–30 ವರ್ಷದ ಯುವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿ, ಶವಕ್ಕೆ ಬೆಂಕಿ ಹಚ್ಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೃತ್ಯವು 3–4 ದಿನಗಳ ಹಿಂದೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ನಿರ್ಜನ ಪ್ರದೇಶದಲ್ಲಿ ಕರಕಲಾದ ಶವದಿಂದ ದುರ್ವಾಸನೆ ಬರುತ್ತಿದ್ದುದನ್ನು ಹೊಲಕ್ಕೆ ತೆರಳಿದ್ದ ಮಹಿಳೆ ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್. ಅರಸಿದ್ದಿ, ಡಿವೈಎಸ್ಪಿ ಜಯಪ್ಪ ನ್ಯಾಮಗೌಡರ್ ಹಾಗೂ ಕನಕಗಿರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಮೃತನ ಗುರುತು ಮತ್ತು ಕೊಲೆಗಾರರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *