ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪ ಗೋವಿನ ಕತ್ತು ಸೀಳಿ ಮಾಂಸ ಮಾರಾಟಕ್ಕೆ ಯತ್ನಿಸಿದ ಪ್ರಕರಣವನ್ನು ಪೊಲೀಸರು ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ-2020 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ವಿಶೇಷ ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಜುಲೈ 4ರಂದು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಹೊಸನಗರ ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

