Breaking News

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರು : ನಗರದಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ, ಬಿಟಿಎಂ ಲೇಔಟ್‌ನಿಂದ ತಾವರೆಕೆರೆ ಕಡೆಗೆ ಸಾಗುವ ರಸ್ತೆಯಲ್ಲಿ ಕ್ಯಾಬ್ ಚಾಲಕನೊಬ್ಬ ರಾಡ್ ಹಿಡಿದು ಮತ್ತೊಬ್ಬ ಕ್ಯಾಬ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ರಸ್ತೆಯಲ್ಲಿ ವಾಹನಕ್ಕೆ ದಾರಿ ಬಿಡುವಂತೆ ಹಾರ್ನ್ ಮಾಡಿದ ವಿಚಾರಕ್ಕೆ ಆಕ್ರೋಶಗೊಂಡ ಕ್ಯಾಬ್ ಚಾಲಕ, ಏಕಾಏಕಿ ಕಾರಿನಿಂದ ಇಳಿದು ಕೈಯಲ್ಲಿ ರಾಡ್ ಹಿಡಿದು ಮತ್ತೊಂದು ಕಾರಿನ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಕೆಲಕಾಲ ರಸ್ತೆಯಲ್ಲೇ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಬಳಿಕ ಸ್ಥಳದಲ್ಲಿದ್ದ ಸಾರ್ವಜನಿಕರು ಮತ್ತು ಸ್ಥಳೀಯರು ತಕ್ಷಣ ಮಧ್ಯಪ್ರವೇಶಿಸಿ ಆಕ್ರೋಶಗೊಂಡ ಚಾಲಕನನ್ನು ಸಮಾಧಾನಪಡಿಸಿದ್ದಾರೆ. ಇದರಿಂದ ಯಾವುದೇ ದೊಡ್ಡ ಅನಾಹುತ ಸಂಭವಿಸದೇ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಈ ಘಟನೆ ನಗರದಲ್ಲಿ ಹೆಚ್ಚುತ್ತಿರುವ ರೋಡ್ ರೇಜ್ ಪ್ರಕರಣಗಳ ಬಗ್ಗೆ ಮತ್ತೆ ಆತಂಕ ಮೂಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹಿಂಸಾತ್ಮಕ ವರ್ತನೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *