ಚಿತ್ರದುರ್ಗ: ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಶಿವಶರಣ ಹರಳಯ್ಯ ಮಠದಲ್ಲಿ ಪೀಠಾಧಿಪತಿ ಬಸವ ಹರಳಯ್ಯ ಸ್ವಾಮೀಜಿ ಹಾಗೂ ಶಾಲಾ ಬಸ್ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮಠದ ಜಾಗದ ವಿವಾದದ ಹಿನ್ನೆಲೆಯಲ್ಲಿ ನಡೆದ ದಾಳಿಯಲ್ಲಿ ಸ್ವಾಮೀಜಿಗೆ ಗಾಯಗಳಾಗಿದ್ದು, ಚಾಲಕ ಭೀಮರಾಜ್ ಮೇಲೂ ಹಲ್ಲೆ ನಡೆಸಲಾಗಿದೆ. ದಾಳಿಯ ಬಳಿಕ ದೂರು ನೀಡಲು ಐಮಂಗಲ ಪೊಲೀಸ್ ಠಾಣೆಗೆ ತೆರಳಿದ್ದ ಸ್ವಾಮೀಜಿಯನ್ನು ಆರೋಪಿಗಳು ಠಾಣೆಯೊಳಗೂ ಬೆನ್ನಟ್ಟಿ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಠಾಣೆಯಲ್ಲಿದ್ದ ಕುರ್ಚಿಗಳನ್ನು ಮುರಿದು ದಾಂಧಲೆ ನಡೆಸಿರುವುದಾಗಿ ತಿಳಿದುಬಂದಿದೆ. ಗಾಯಾಳುಗಳಾದ ಸ್ವಾಮೀಜಿ ಮತ್ತು ಭೀಮರಾಜ್ ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

