Breaking News

ಹೂಡಿಕೆ ನೆಪದಲ್ಲಿ ಹಣ ಪಡೆದು ಉದ್ಯಮಿಗಳಿಗೆ ಬ್ಲಾಕ್ ಮೇಲ್: ಮಹಿಳೆ ವಿರುದ್ಧ 8 ಕೇಸ್ ದಾಖಲು

ಉಡುಪಿ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆಯ ನೆಪದಲ್ಲಿ ಹಣ ಪಡೆದು ನಂತರ ಖಾಸಗಿ ವಿಡಿಯೋ ಬಹಿರಂಗಪಡಿಸುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಜೀನತ್ ಇಬ್ರಾಹಿಂ ಬಂಧಿತ ಆರೋಪಿಯಾಗಿದ್ದು, ವಿವಿಧ ಪೊಲೀಸ್ ಠಾಣೆಗಳಲ್ಲಿ ಅವರ ಮೇಲೆ ಎಂಟು ಪ್ರಕರಣ ದಾಖಲಾಗಿವೆ ಎಂದು ಎಸ್‌ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಉದ್ಯಮಿಯೊಬ್ಬರು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡಲು ಜೀನತ್ ಇಬ್ರಾಹಿಂಗೆ 70 ಲಕ್ಷ ರೂ. ನೀಡಿದ್ದು, ಹಣ ವಾಪಸ್ ಕೇಳಿದಾಗ ಬೆದರಿಕೆ ಹಾಕಿದ್ದಾಳೆ. ಇದೇ ರೀತಿಯ ವಿಡಿಯೋ ಇಟ್ಟುಕೊಂಡು ಇನ್ನೂ ಹಲವರಿಗೆ ಹನಿ ಟ್ರ್ಯಾಪ್ ಮತ್ತು ಬ್ಲಾಕ್ಮೇಲ್ ಮಾಡಿದ್ದಾಳೆ. ಜೀನತ್ ಮೇಲೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಐದು ದಿನ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಜೀನತ್ ಮೇಲೆ ಈಗಾಗಲೇ 7 ಚೆಕ್ ಬೌನ್ಸ್ ಪ್ರಕರಣಗಳು ಇರುವುದು ಕಂಡು ಬಂದಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *