ಮುಂಬೈ: ಭಾರೀ ಮುಂಗಾರು ಮಳೆಯಿಂದ ಮುಂಬೈನಲ್ಲಿ ಭಾನುವಾರ ಸಂಭವಿಸಿದ ವಿವಿಧ ಅವಘಡಗಳಲ್ಲಿ 7 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮನ್‌ಖರ್ದ್ ಪ್ರದೇಶದಲ್ಲಿ ಮನೆ ಕುಸಿದು 6 ಮಂದಿ ಸಾವನ್ನಪ್ಪಿದರೆ, ಮತ್ತೊಂದು ಘಟನೆಯಲ್ಲಿ ಮನೆಯ ಮೇಲೆ ಮರ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ. ಕಟ್ಟಡದ ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ಇದ್ದು, ಅಗ್ನಿಶಾಮಕ ದಳ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಧಾರಾಕಾರ ಮಳೆಯಿಂದ ವಿಮಾನ ಮತ್ತು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ನಗರದ ಹಲವು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ಕೇರಳ, ದೆಹಲಿ, ಪಶ್ಚಿಮ ಬಂಗಾಳ ಹಾಗೂ ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲೂ ಭಾರೀ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಒಡಿಶಾ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಇನ್ನಷ್ಟು ಮಳೆಯ ಮುನ್ಸೂಚನೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

