ಬೆಂಗಳೂರು ರಸ್ತೆಗಳಲ್ಲಿ ಬೈಕ್ ಸವಾರರ ವೀಲಿಂಗ್ ಹಾವಳಿ ಮಿತಿಮೀರಿದ್ದು, ಇದೀಗ ಆಂಬ್ಯುಲೆನ್ಸ್ ಮುಂದೆಯೇ ವೀಲಿಂಗ್ ಮಾಡಿ ರೋಗಿಯ ಜೀವದೊಂದಿಗೆ ಚೆಲ್ಲಾಟವಾಡಿದ ಅಮಾನವೀಯ ಘಟನೆ ನಡೆದಿದೆ. ಘಟನೆ ಜುಲೈ 4ರ ಮಧ್ಯರಾತ್ರಿ ಯಶವಂತಪುರ– ಗೊರಗುಂಟೆಪಾಳ್ಯ ರಸ್ತೆಯಲ್ಲಿ ನಡೆದಿದೆ. ತುರ್ತು ಚಿಕಿತ್ಸೆಗಾಗಿ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ, ಬೈಕ್ ಸವಾರರು ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಾ ವಾಹನದ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಅವರು ಹೆಲ್ಮೆಟ್ ಧರಿಸಿರಲಿಲ್ಲ ಹಾಗೂ ಬೈಕ್‌ಗೆ ನಂಬರ್ ಪ್ಲೇಟ್ ಕೂಡ ಇರಲಿಲ್ಲ. ಈ ದೃಶ್ಯವನ್ನು ರೋಗಿಯ ಕುಟುಂಬಸ್ಥರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ವೈರಲ್ ಆಗಿದೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮತ್ತು ನೆಟ್ಟಿಗರು ಬೆಂಗಳೂರು ಸಂಚಾರಿ ಪೊಲೀಸರನ್ನು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

