Breaking News

ಬಸ್ ನಿಲ್ದಾಣದಲ್ಲಿದ್ದ ವಿದ್ಯಾರ್ಥಿನಿಗೆ ಮಚ್ಚಿನಿಂದ ಹಲ್ಲೆ ಮಾಡಿ ಯುವಕ ಪರಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೋಂತಿಮಾರು ಪಡ್ಪು ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ 17 ವರ್ಷದ ವಿದ್ಯಾರ್ಥಿನಿಗೆ ಯುವಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಸ್ಥಳೀಯ ನಿವಾಸಿ ಮೊಹಮ್ಮದ್ ಜವ್ವಾರ್ (28) ಹಲ್ಲೆ ನಡೆಸಿದ ಆರೋಪಿ ಎಂದು ಗುರುತಿಸಲಾಗಿದ್ದು, ಘಟನೆಯ ಬಳಿಕ ಪರಾರಿಯಾಗಿದ್ದ. ಬಳಿಕ ಆತ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಹಲ್ಲೆಯಿಂದ ವಿದ್ಯಾರ್ಥಿನಿಯ ತಲೆ ಮತ್ತು ಕೈಗೆ ಗಾಯಗಳಾಗಿದ್ದು, ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *