Breaking News

ಮೊಹರಂ ದಿನವೇ ನಡೆದಿತ್ತು KPCC ಮುಖಂಡನ ಹತ್ಯೆಗೆ ಪ್ಲ್ಯಾನ್: ಪ್ರಮುಖ ಆರೋಪಿ ಅರೆಸ್ಟ್! ಸ್ಪೋಟಕ ಮಾಹಿತಿ ಬಯಲು

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಹತ್ಯೆ ಸಂಚು ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಪ್ರಮುಖ ಆರೋಪಿ ಹರ್ಷನನ್ನು ಬಂಧಿಸಿದ್ದಾರೆ. ಆತನಿಂದ ಕಂಟ್ರಿಮೇಡ್ ಪಿಸ್ತೂಲ್, ಎಂಟು ಜೀವಂತ ಗುಂಡುಗಳು ಹಾಗೂ ಪೆಪ್ಪರ್ ಸ್ಪ್ರೇ ವಶಪಡಿಸಿಕೊಳ್ಳಲಾಗಿದೆ. ತನಿಖೆಯಲ್ಲಿ ಹರ್ಷ ಚಾಮರಾಜನಗರದ ಕಾಡಿನಲ್ಲಿ ಗನ್ ಬಳಕೆಯ ತರಬೇತಿ ಪಡೆದಿದ್ದ ಹಾಗೂ ಫೈರಿಂಗ್ ಪ್ರಾಕ್ಟೀಸ್ ನಡೆಸಿದ್ದ ಮಾಹಿತಿ ಬೆಳಕಿಗೆ ಬಂದಿದೆ. ಮೊಹರಂ ದಿನ ಅಬ್ಬಾಸ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಈ ಪ್ರಕರಣದಲ್ಲಿ ಹರ್ಷ ಸೇರಿದಂತೆ ಒಟ್ಟು ಒಂಬತ್ತು ಮಂದಿಯನ್ನು ಬಂಧಿಸಿರುವ ಸಿಸಿಬಿ, ಲಾಂಗು, ಮಚ್ಚು ಸೇರಿದಂತೆ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *