ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಳಕಿ ಗ್ರಾಮದ ತೆಂಕೋಲ್ ಬಸ್ ನಿಲ್ದಾಣದಲ್ಲಿ ಚೀಲದಲ್ಲಿ ಕಟ್ಟಿ ಬಿಟ್ಟು ಹೋಗಿದ್ದ ನವಜಾತ ಹೆಣ್ಣು ಮಗುವನ್ನು ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ರಕ್ಷಿಸಿದ್ದಾರೆ. ಭಾನುವಾರ ರಾತ್ರಿ ಮಗುವಿನ ಅಳುವಿನ ಶಬ್ದ ಕೇಳಿದ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ತಂಡ ಮಗುವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದೆ. ವೈದ್ಯರ ಪರೀಕ್ಷೆಯಲ್ಲಿ ಮಗು ಆರೋಗ್ಯವಾಗಿದ್ದು, ಹೆಚ್ಚಿನ ಆರೈಕೆಗೆ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವನ್ನು ಬಿಟ್ಟು ಹೋದವರು ಯಾರು ಮತ್ತು ಕೃತ್ಯದ ಹಿಂದಿನ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

