ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುತ್ತರಗಿ ತಾಂಡದಲ್ಲಿ ಇಬ್ಬರು ಯುವಕರನ್ನು ಅರೆಬೆತ್ತಲೆಗೊಳಿಸಿ ಕೈಕಾಲು ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಂಕರಲಿಂಗ ನಾಯ್ಕ್ ವಿರುದ್ಧ ಈ ಕೃತ್ಯದ ಆರೋಪ ಕೇಳಿಬಂದಿದ್ದು, ಹಣದ ವಿಚಾರಕ್ಕೆ ಇಬ್ಬರು ಯುವಕರಿಗೆ ಚಿತ್ರಹಿಂಸೆ ನೀಡಲಾಗಿದೆ ಎನ್ನಲಾಗಿದೆ. ಇದೇ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪವೂ ಕೇಳಿಬಂದಿದೆ. ಕೈಯಲ್ಲಿ ಪಿಸ್ತೂಲ್ ಹಿಡಿದು ಪೋಸ್ ನೀಡಿರುವ ಶಂಕರಲಿಂಗನ ಮತ್ತೊಂದು ವಿಡಿಯೋ ಕೂಡ ವೈರಲ್ ಆಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

