Breaking News

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯಲ್ಲೇ ಭೇದಿಸಿ ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ. ಜುಲೈ 5ರಂದು ದೇವರ ದರ್ಶನದ ಬಳಿಕ ಭಕ್ತೆ ನಿಮಿಶಾ ಅವರ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ಕಳುವಾಗಿತ್ತು. ದೂರು ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿ, ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಿದರು. ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ (33), ಶಾರದಾ (50) ಮತ್ತು ದುರ್ಗಮ್ಮ (44) ಎಂದು ಗುರುತಿಸಲಾಗಿದೆ. ಮೂವರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರ ಪ್ರಕಾರ, ಶಾರದಾ ಹಾಗೂ ದುರ್ಗಮ್ಮ ವಿರುದ್ಧ ಈ ಹಿಂದೆಯೂ ಹಲವು ಕಳ್ಳತನ ಪ್ರಕರಣಗಳು ದಾಖಲಾಗಿವೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *