Breaking News

ಫೋನ್ ಪೇ ಮೂಲಕ ಲಂಚ, ಭ್ರಷ್ಟ ಅಧಿಕಾರಿಯನ್ನು ಲಾಕ್ ಮಾಡಿದ ಲೋಕಾ!

ಕಲಬುರಗಿ: ಸರ್ಕಾರದ ವಸತಿ ಯೋಜನೆಯ ಅನುದಾನ ಬಿಡುಗಡೆ ಮಾಡಲು ಫಲಾನುಭವಿಯಿಂದ ಫೋನ್‌ಪೇ ಮೂಲಕ ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕರದಾಳ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಸಂತೋಷ ರಾಠೋಡರನ್ನು ಕಲಬುರಗಿ ಲೋಕಾಯುಕ್ತ ಪೊಲೀಸರು ಬಣ್ಣದ ಕೈಯಲ್ಲಿ ಬಂಧಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯ 3ನೇ ಮತ್ತು 4ನೇ ಕಂತಿನ ಹಣ ಬಿಡುಗಡೆಗೆ ಆರೋಪಿ ಒಟ್ಟು ₹22 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ ₹15 ಸಾವಿರವನ್ನು ಫೋನ್‌ಪೇ ಮೂಲಕ ಕಳುಹಿಸುವಂತೆ ಸೂಚಿಸಿದ್ದ ಎನ್ನಲಾಗಿದೆ. ದೂರುದಾರ ಸಿಖಂದರ್ ನೀಡಿದ ಮಾಹಿತಿಯ ಆಧಾರದ ಮೇಲೆ ಲೋಕಾಯುಕ್ತ ಇನ್ಸ್‌ಪೆಕ್ಟರ್ ರಾಜಶೇಖರ ಬಡದೇಸಾರ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ. ಪ್ರಕರಣದ ಕುರಿತು ಮುಂದಿನ ತನಿಖೆ ಮತ್ತು ಕಾನೂನು ಕ್ರಮ ಮುಂದುವರಿದಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *