ಚಿಂತಾಮಣಿ: ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೊಬ್ಬ ಪತ್ನಿ ಹಾಗೂ ನಾದಿನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಂತಾಮಣಿ ಪಟ್ಟಣದ ಜೆಜೆ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಶಮಾ (30) ಮತ್ತು ಆಕೆಯ ಸಹೋದರಿ ರೇಷಾ (20) ಎಂದು ಗುರುತಿಸಲಾಗಿದೆ. ಆರೋಪಿ ಏಜಾಝ್‌ಖಾನ್ ಪತ್ನಿಯನ್ನು ಮಕ್ಕಳೊಂದಿಗೆ ಮನೆಗೆ ಕರೆತರುವ ವಿಚಾರವಾಗಿ ಜಗಳವಾಡಿ, ಬಳಿಕ ಪತ್ನಿ ಮತ್ತು ಮಧ್ಯೆ ಬಂದ ನಾದಿನಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಘಟನೆಯ ಬಳಿಕ ಆರೋಪಿ ತನ್ನ ಮೂವರು ಮಕ್ಕಳೊಂದಿಗೆ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿ ಆರೋಪಿಗಾಗಿ ಶೋಧ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

