Breaking News

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಟೋರಿಯಸ್ ದಲ್ಲಾಳಿ ಅರೆಸ್ಟ್!

ಬೆಂಗಳೂರು ನಗರದ ಮಾದನಾಯಕನಹಳ್ಳಿ ಪೊಲೀಸರು ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವೇಶ್ಯಾವಾಟಿಕೆ ದಂಧೆಯ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಚೇತನ್ ಕುಮಾರ್ ಅಲಿಯಾಸ್ ಮಂಗಳಮುಖಿ ಚೇತನ್ (40) ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಹತ್ತಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಪೊಲೀಸರ ಕಣ್ಣಿನಿಂದ ತಪ್ಪಿಸಿಕೊಳ್ಳಲು ಮಂಗಳಮುಖಿಯ ವೇಷ ಧರಿಸುತ್ತಿದ್ದ ಚೇತನ್, ದೆಹಲಿ ಹಾಗೂ ಮುಂಬೈ ಸೇರಿದಂತೆ ಹೊರರಾಜ್ಯಗಳಿಂದ ಯುವತಿಯರನ್ನು ಕರೆತಂದು ಅನೈತಿಕ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಜುಲೈ 6ರಂದು ಪೀಣ್ಯ ರಸ್ತೆಯ ಸಮೀಪದ ಲಾಡ್ಜ್‌ನಲ್ಲಿ ಅಡಗಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು, ಈತನ ಜಾಲದಲ್ಲಿ ಭಾಗಿಯಾಗಿರುವ ಇತರರ ಬಗ್ಗೆ ಹಾಗೂ ದಂಧೆಯ ವ್ಯಾಪ್ತಿಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *