Breaking News

ಗುಡ್ಡದಲ್ಲಿ ಯುವತಿಯ ಸುಟ್ಟ ಮೃತದೇಹ ಪತ್ತೆ ಪ್ರಕರಣ ಭೇದಿಸಿದ ಬೆಳಕವಾಡಿ ಪೊಲೀಸರು

ಮಂಡ್ಯ ಜಿಲ್ಲೆಯ ಜವನಗಹಳ್ಳಿ ಗುಡ್ಡದ ಸಮೀಪ ಪತ್ತೆಯಾಗಿದ್ದ ಮಹಿಳೆಯ ಸುಟ್ಟ ಶವ ಪ್ರಕರಣವನ್ನು ಬೆಳಕವಾಡಿ ಪೊಲೀಸರು ಭೇದಿಸಿದ್ದಾರೆ. ನಳಿನಿ ಎಂಬ ಯುವತಿಯನ್ನು ಮದುವೆಗೆ ಒತ್ತಾಯಿಸುತ್ತಿದ್ದಳು ಎಂಬ ಕಾರಣಕ್ಕೆ ರಾಜಶೇಖರ್ ಕೊಲೆ ಮಾಡಿ, ಬಳಿಕ ಶವವನ್ನು ಸುಟ್ಟು ಸಾಕ್ಷ್ಯ ನಾಶ ಮಾಡಲು ಯತ್ನಿಸಿದ್ದಾನೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಘಟನಾ ಸ್ಥಳದಲ್ಲಿ ಪತ್ತೆಯಾದ ಕೈಗಡಿಯಾರ, ಉಂಗುರ, ಹೇರ್‌ಕ್ಲಿಪ್ ಹಾಗೂ ಮನೆಯ ಕೀ ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು, ಸಿಸಿಟಿವಿ ದೃಶ್ಯಗಳ ನೆರವಿನಿಂದ ರಾಜಶೇಖರ್ ಬಳಸಿದ್ದ ಕಾರನ್ನು ಪತ್ತೆಹಚ್ಚಿದರು. ವಿಚಾರಣೆ ತೀವ್ರಗೊಳ್ಳುತ್ತಿದ್ದಂತೆ ಆರೋಪಿ ರಾಜಶೇಖರ್ ತನ್ನ ತಾಯಿಯೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. ಪ್ರಕರಣದ ತನಿಖೆಯನ್ನು ಎಸ್‌ಪಿ ಡಾ. ಶೋಭಾರಾಣಿ ಅವರ ಮಾರ್ಗದರ್ಶನದಲ್ಲಿ ನಾಲ್ಕು ವಿಶೇಷ ತಂಡಗಳು ನಡೆಸಿದ್ದು, ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *