Breaking News

ಬೆಂಗಳೂರಲ್ಲಿ ರಕ್ತಪಾತ: ಬಾರ್‌ನಲ್ಲಿ ಗುರಾಯಿಸಿದ್ದೇ ತಪ್ಪಾಯ್ತು, ಯುವಕನ ಎದೆಗೆ ಬಾಟಲಿ ಚುಚ್ಚಿ ಹತ್ಯೆ

ಬೆಂಗಳೂರು ಕನಕಪುರ ರಸ್ತೆಯ ಜರಗನಹಳ್ಳಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನನ್ನು ಬಿಯರ್ ಬಾಟಲಿ ಹಾಗೂ ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಮೃತನನ್ನು ಉದಯ್ ಕುಮಾರ್ ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಚೆಲುವ ಮತ್ತು ತೇಜ್ ಎಂಬುವರ ವಿರುದ್ಧ ಆರೋಪ ಕೇಳಿಬಂದಿದೆ. ಬಾರ್‌ನಲ್ಲಿ ಕುಳಿತಿದ್ದ ವೇಳೆ ಉದಯ್ ಆರೋಪಿಗಳ ಕಡೆಗೆ ಗುರಾಯಿಸಿದ್ದ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಆರೋಪಿಗಳು ಉದಯ್‌ನನ್ನು ಹಿಂಬಾಲಿಸಿ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ, ಒಡೆದ ಬಾಟಲಿಯಿಂದ ಎದೆಗೆ ಚುಚ್ಚಿದ್ದಾರೆ. ತೀವ್ರ ರಕ್ತಸ್ರಾವದಿಂದ ಉದಯ್ ಸ್ಥಳದಲ್ಲೇ ಕುಸಿದು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *