ಹನಗೋಡು: ಹೋಬಳಿಯ ದೊಡ್ಡಹೆಜ್ಜೂರು ಗ್ರಾಮದಲ್ಲಿ ಸೋಮವಾರ ಸಂಜೆ ತಂಬಾಕು ಹದ ಮಾಡುವ ವೇಳೆ ಬ್ಯಾರನ್‌ಗೆ ಬೆಂಕಿ ತಗುಲಿ, ಹದಗೊಳಿಸುತ್ತಿದ್ದ ಹೊಗೆಸೊಪ್ಪು ಹಾಗೂ ಬ್ಯಾರನ್ ಸಂಪೂರ್ಣ ಸುಟ್ಟು ಹೋಗಿದೆ. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಬ್ಯಾರನ್‌ಗೆ ವ್ಯಾಪಿಸಿತು. ಬೆಂಕಿಯಿಂದ ದಟ್ಟ ಹೊಗೆ ಆವರಿಸಿದ ಪರಿಣಾಮ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ, ಅಷ್ಟರಲ್ಲೇ ಬ್ಯಾರನ್‌ನಲ್ಲಿದ್ದ ತಂಬಾಕು ಹಾಗೂ ಬ್ಯಾರನ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು. ಈ ಅವಘಡದಿಂದ ಸುಮಾರು 2 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

