Breaking News

12 ವರ್ಷಗಳ ವಂಚನೆಯ ಆಟಕ್ಕೆ ಬಿತ್ತು ಬ್ರೇಕ್: ನಕಲಿ ಡಿವೈಎಸ್‌ಪಿ ಕೊನೆಗೂ ಅರೆಸ್ಟ್!

ವಿಜಯಪುರ: ಪೊಲೀಸ್ ಹಾಗೂ ಪಿಎಸ್‌ಐ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ನಡೆಸಿ, 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿವೈಎಸ್‌ಪಿ ಗ್ಯಾನನಗೌಡ ಉರ್ಫ್ ಗಣೇಶನನ್ನು ಎಪಿಎಂಸಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ಖಾಕಿ ಸಮವಸ್ತ್ರ ಧರಿಸಿ ಡಿವೈಎಸ್‌ಪಿ ಎಂದು ಪರಿಚಯಿಸಿಕೊಂಡು ನಿರುದ್ಯೋಗಿ ಯುವಕರಿಂದ ಹಣ ಪಡೆದು ವಂಚಿಸುತ್ತಿದ್ದ. 2014ರಲ್ಲಿ ಹಣ ವಾಪಸ್ ಕೇಳಿದ್ದ ವ್ಯಕ್ತಿಯನ್ನು ಅಪಹರಿಸಿ ಕೊಲೆ ಯತ್ನ ನಡೆಸಿದ ಆರೋಪವೂ ಈತನ ಮೇಲಿದೆ. ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು ಜುಲೈ 6ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ವಿರುದ್ಧ ವಿಜಯಪುರ, ಮುದ್ದೇಬಿಹಾಳ, ಆದರ್ಶನಗರ ಹಾಗೂ ತಾಳಿಕೋಟೆ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *