ಬಳ್ಳಾರಿಯ ಗುಗ್ಗರಟ್ಟಿಯಲ್ಲಿ 24 ವರ್ಷದ ನಾಗಲಕ್ಷ್ಮೀ ಹಾಗೂ ಆಕೆಯ ತಂದೆ ಶ್ರೀನಿವಾಸ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ನಾಗಲಕ್ಷ್ಮಿಯ ಪತಿ ತೇಜಾ ಹಾಗೂ ಆತನ ತಂದೆ ಗುರುಶಂಕರ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಕೌಟುಂಬಿಕ ಕಲಹದ ವಿಚಾರವಾಗಿ ಸಂಧಾನ ನಡೆಸೋಣ ಎಂದು ಮನೆಗೆ ಕರೆಸಿಕೊಂಡ ಬಳಿಕ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಆರೋಪಿಗಳು ಇಬ್ಬರ ಮೇಲೂ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಪತ್ನಿಯ ನಡತೆಯ ಮೇಲಿನ ಅನುಮಾನವೇ ಕೃತ್ಯಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗದೇ ಶವಗಳ ಮುಂದೆಯೇ ಕುಳಿತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

