Breaking News

11 ಮಂದಿ ಡ್ರಗ್ಸ್ ಪೆಡ್ಲರ್‌ಗಳ ಬಂಧನ, 2.85 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 9 ಹೊರ ರಾಜ್ಯದವರು ಹಾಗೂ ಇಬ್ಬರು ಸ್ಥಳೀಯರು ಸೇರಿ 11 ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಎಂಡಿಎಂಎ, ಹೈಡ್ರೋ ಗಾಂಜಾ ಹಾಗೂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು 2.85 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳು ಜಪ್ತಿಯಾಗಿವೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಹೊರ ರಾಜ್ಯಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ತಂದು, ಪರಿಚಿತರ ಮೂಲಕ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ವಿವಿಧ ಪೊಲೀಸ್ ಠಾಣೆಗಳ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಎಂಡಿಎಂಎ, ಹೈಡ್ರೋ ಗಾಂಜಾ, ಗಾಂಜಾ, ನಗದು, ಬೈಕ್ ಹಾಗೂ ಮೊಬೈಲ್‌ಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಇತರ ಆರೋಪಿಗಳ ಪತ್ತೆಗಾಗಿ ಬೆಂಗಳೂರು ನಗರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *