ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಸಿಎಆರ್ ಪೊಲೀಸ್ ಪೇದೆ ಶಿವಕುಮಾರ್ ಮಾವನೂರ್ (32) ಇಲಾಖೆಯಿಂದ ನೀಡಲಾಗಿದ್ದ ಸರ್ಕಾರಿ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ವಾಹನದೊಳಗೇ ಈ ಘಟನೆ ನಡೆದಿದ್ದು, ಗುಂಡಿನ ಸದ್ದು ಕೇಳಿ ಸ್ಥಳಕ್ಕೆ ಧಾವಿಸಿದ ಸಹೋದ್ಯೋಗಿಗಳು ಅಷ್ಟರಲ್ಲೇ ಅವರು ಮೃತಪಟ್ಟಿರುವುದನ್ನು ಕಂಡಿದ್ದಾರೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರು, ಡಿಸಿಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮೂರು ತಿಂಗಳ ಹಿಂದಷ್ಟೇ ಬೆಂಗಳೂರಿನಿಂದ ಕಲಬುರಗಿಗೆ ವರ್ಗಾವಣೆಯಾಗಿದ್ದ ಶಿವಕುಮಾರ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾನಸಿಕ ಒತ್ತಡ ಅಥವಾ ಕೌಟುಂಬಿಕ ಸಮಸ್ಯೆ ಹಿನ್ನೆಲೆಯೇ ಎಂಬ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

