Breaking News

ಮೇವು ತರಲು ಹೋದ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ, ಹತ್ಯೆ!

ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾಕರಸನಹಳ್ಳಿ ಗ್ರಾಮದಲ್ಲಿ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಹಸುಗಳಿಗೆ ಮೇವು ತರಲು ಹೊಲಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವೃದ್ಧೆ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹೊಲಕ್ಕೆ ತೆರಳಿ ಹುಡುಕಿದಾಗ ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆಯಾಗಿದೆ. ಮಾಹಿತಿ ತಿಳಿದ ತಕ್ಷಣವೇ ಪೊಲೀಸರು, ಶ್ವಾನದಳ ಹಾಗೂ ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿ ವೇಮಗಲ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿಯನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *