Breaking News

ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಸತಿ ಶಾಲೆಯ, 6ನೇ ತರಗತಿ ವಿದ್ಯಾರ್ಥಿ ಸಾವು!

ಬೆಂಗಳೂರು : ಅನುಮಾನಾಸ್ಪದ ರೀತಿಯಲ್ಲಿ ವಸತಿ ಶಾಲೆಯ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ ವಸತಿ ಶಾಲೆಯಲ್ಲಿ ನಡೆದಿದೆ. ಸ್ಟ್ರಲಿಂಗ್ ಆಂಗ್ಲ ಮಾಧ್ಯಮದ ವಸತಿ ಶಾಲೆಯ ವಿದ್ಯಾರ್ಥಿ ಗುರುಕಿರಣ್ (12) ಎಂದು ತಿಳಿದುಬಂದಿದೆ.6ನೇ ತರಗತಿಯಲ್ಲಿ ಗುರುಕಿರಣ್ ವ್ಯಾಸಂಗ ಮಾಡುತ್ತಿದ್ದ. ಸುಬೇದಾರ್ ಪಾಳ್ಯದ ರಾಘವೇಂದ್ರ ಎಂಬುವವರ ಮಗ ಗುರುಕಿರಣ್ ವಿದ್ಯಾರ್ಥಿಗೆ ಅನಾರೋಗ್ಯ ಎಂದು ಆಸ್ಪತ್ರೆಗೆ ಕರೆತಂದಿದ್ದಾಗಿ ಹೇಳಿಕೆ ನೀಡಲಾಗಿತ್ತು. ಆಸ್ಪತ್ರೆಗೆ ಕರೆ ತಂದಿದ್ದಾಗಿ ವಸತಿ ಶಾಲೆ ಶಿಕ್ಷಕರು ಪೋಷಕರಿಗೆ ಕರೆ ಮಾಡಿ ತಿಳಿಸಿದ್ದರು. ಪೋಷಕರು ಆಸ್ಪತ್ರೆಗೆ ಬರುವಷ್ಟರಲ್ಲಿ ಗುರುಕಿರಣ್ ಮೃತಪಟ್ಟಿದ್ದ. ಶಿಕ್ಷಕರೇ ಹಲ್ಲೆ ಮತ್ತು ಒತ್ತಡದಿಂದ ಬಾಲಕ ಸಾವನ್ನಪ್ಪಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ಬಳಿ ವಿದ್ಯಾರ್ಥಿಯ ಪೋಷಕರ ಆಕ್ರಂದನ ಇದೀಗ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಬಾಗಲೂರು ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *