ತುಮಕೂರು ಜಿಲ್ಲೆಯ ಹುಳಿಯಾರಿನಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಅಂತರ್ಜಿಲ್ಲಾ ಖೋಟಾ ನೋಟು ಜಾಲದ ಪ್ರಮುಖ ಆರೋಪಿ ರುದ್ರೇಶ್ (41)ನನ್ನು ಹುಳಿಯೂರು ಹಾಗೂ ಮಾದನಾಯಕನಹಳ್ಳಿ ಪೊಲೀಸರ ಜಂಟಿ ತಂಡ ಬಂಧಿಸಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಂಡನಹಳ್ಳಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಹುಳಿಯಾರಿನ ಅಂಗಡಿಯೊಂದರಲ್ಲಿ ಸಿಗರೇಟ್ ಖರೀದಿಸಲು ₹500 ನಕಲಿ ನೋಟು ನೀಡಿದ್ದಾಗ ವ್ಯಾಪಾರಿಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ರುದ್ರೇಶ್ ವಿರುದ್ಧ ಈ ಹಿಂದೆಯೂ ಖೋಟಾ ನೋಟು ಪ್ರಕರಣ ದಾಖಲಾಗಿತ್ತು. 2024ರಲ್ಲಿ ಸುಮಾರು ₹20 ಲಕ್ಷ ಮೌಲ್ಯದ ನಕಲಿ ನೋಟು ಮುದ್ರಿಸಿ ಚಲಾವಣೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಆತ, ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಮತ್ತೆ ಇದೇ ದಂಧೆಯಲ್ಲಿ ತೊಡಗಿದ್ದಾನೆ ಎನ್ನಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

