Breaking News

ಮದುವೆಯಾದ ನಾಲ್ಕೇ ತಿಂಗಳಲ್ಲಿ ಕಿರಿಕ್ – ಹೆಲ್ಮೆಟ್ ನಿಂದ ಹೊಡೆದು ಪತ್ನಿಯ ಹತ್ಯೆ!

ಹುಬ್ಬಳ್ಳಿ: ತಾರಿಹಾಳ್‌ನಲ್ಲಿ ಕೇವಲ ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ನಾಗರತ್ನಾ ಹಳೆಮನಿ (19) ಅವರನ್ನು ಪತಿ ಶಿವರಾಜ್ ಕೌಟುಂಬಿಕ ಕಲಹದ ವೇಳೆ ಹೆಲ್ಮೆಟ್‌ನಿಂದ ಹೊಡೆದು ಕೊಲೆ ಮಾಡಿದ ಘಟನೆ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ದಂಪತಿ ನಡುವೆ ಇತ್ತೀಚೆಗೆ ಸಣ್ಣಪುಟ್ಟ ವಿಚಾರಗಳಿಗೆ ಆಗಾಗ ಜಗಳವಾಗುತ್ತಿತ್ತು. ಘಟನೆ ನಡೆದ ದಿನವೂ ಮಾತಿನ ಚಕಮಕಿ ತೀವ್ರಗೊಂಡಿದ್ದು, ಕೋಪಗೊಂಡ ಶಿವರಾಜ್ ಹೆಲ್ಮೆಟ್‌ನಿಂದ ಪತ್ನಿಯ ತಲೆಗೆ ಬಲವಾಗಿ ಹೊಡೆದ ಪರಿಣಾಮ ನಾಗರತ್ನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಶಿವರಾಜ್‌ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *