Breaking News

ಕಸದಬುಟ್ಟಿಯಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋದ ಅಮ್ಮ: ಕುರಿಗಾಹಿಯಿಂದ ಕಂದನ ರಕ್ಷಣೆ

ಬೆಳಗಾವಿ: ನವಜಾತ ಗಂಡು ಶಿಶುವನ್ನು ಕಸದ ತೊಟ್ಟಿಯಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದ ಸಮೀಪದ ಬಸವಣಕಟ್ಟೆ ಸೇತುವೆ ಕೆಳಗೆ ನಡೆದಿದೆ. ಮಗು ಅಳುವ ಶಬ್ದ ಕೇಳಿದ ಕುರಿಗಾಹಿಯೊಬ್ಬರು ಕಂದನನ್ನು ರಕ್ಷಿಸಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮಗುವನ್ನು ಸವದತ್ತಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಮಗು ಆರೋಗ್ಯವಾಗಿದ್ದು ವೈದ್ಯರ ಆರೈಕೆಯಲ್ಲಿದೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸುರೇಬಾನ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಗುವಿನ ತಾಯಿಯ ಪತ್ತೆಗೆ ಕಿತ್ತೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಸುರೇಬಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಒಂದೇ ಕುಟುಂಬದ 7 ಜನರ ಹತ್ಯೆ; ಪತ್ನಿ ಮೇಲಿನ ದ್ವೇಷಕ್ಕೆ ಇಡೀ ಕುಟುಂಬವನ್ನೇ ಮುಗಿಸಿದ ಪತಿ!

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕ ಇಂದುಶೇಖರ್ ಎಂಬಾತ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ …

Leave a Reply

Your email address will not be published. Required fields are marked *