Breaking News

ಹೆಣ್ಣುಮಕ್ಕಳನ್ನು ಚುಡಾಯಿಸಿದ ಆರೋಪ: ಬೀದರ್‌ನಲ್ಲಿ ಯುವಕನ ಭೀಕರ ಕೊಲೆ

ಬೀದರ್: ಹಳೆಯ ವೈಷಮ್ಯ ಹಾಗೂ ಯುವತಿಯರನ್ನು ಚುಡಾಯಿಸಿದ ಆರೋಪದ ಹಿನ್ನೆಲೆಯಲ್ಲಿ 26 ವರ್ಷದ ಯುವಕನನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೀದರ್ ತಾಲೂಕಿನ ಜಮಿಸ್ತಾನಪುರ ಗ್ರಾಮದಲ್ಲಿ ನಡೆದಿದೆ. ಕಿರಣ್‌ಕುಮಾರ್ ಮೃತ ಯುವಕ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಪಲ್ಸರ್ ಬೈಕ್‌ನಲ್ಲಿ ತೆರಳುತ್ತಿದ್ದ ಕಿರಣ್‌ಕುಮಾರ್‌ನನ್ನು ಹೊಂಚು ಹಾಕಿದ್ದ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಕಿರಣ್‌ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಇದೇ ವಿಚಾರವಾಗಿ ಕಿರಣ್‌ಗೆ ಬೆದರಿಕೆ ಹಾಕಲಾಗಿತ್ತು. ಬಳಿಕ ಸಂಧಾನದ ನೆಪದಲ್ಲಿ ಕರೆಸಿ ಹತ್ಯೆ ಮಾಡಲಾಗಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಬೀದರ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬದ ದೂರಿನ ಮೇರೆಗೆ ಎಂ.ಡಿ. ಜುನೈದ್ ಸಿರಾಜ್ ಸೇರಿದಂತೆ ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *