Breaking News

ಕಿಡಿಗೇಡಿಗಳಿಂದ ಕಾರು ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಮದ್ದೂರು: ಕಾರು ಟಚ್ ಆಗಿದ್ದನ್ನು ಪ್ರಶ್ನಿಸಿದ್ದಕ್ಕೆ ಚಾಲಕನ ಮೇಲೆ ಕಿಡಿಗೇಡಿಗಳ ಗುಂಪು ಭೀಕರ ಹಲ್ಲೆ ನಡೆಸಿದ ಘಟನೆ ಮದ್ದೂರಿನಲ್ಲಿ ನಡೆದಿದೆ. ಗಾಯಗೊಂಡ ಬೆಂಗಳೂರಿನ ಅತ್ತಿಗುಪ್ಪೆ ನಿವಾಸಿ ಸಾಗರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸಾಗರ್ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಜಾಕ್ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ. ಪತ್ನಿ, ತಾಯಿ ಹಾಗೂ 5 ವರ್ಷದ ಮಗುವಿನ ಎದುರೇ ಹಲ್ಲೆ ನಡೆದಿದ್ದು, ಮಗುವಿನ ಕೈಗೂ ಗಾಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್, ಅರುಣ್‌ಕುಮಾರ್ ಹಾಗೂ ಅಭಿಷೇಕ್ ಅವರನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ. ಘಟನೆ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *