Breaking News

ಹಿಂದೂ ಯುವತಿಗೆ ಚಾಕು ತೋರಿಸಿ ಬೆದರಿಕೆ… ಆರು ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ

ಪುತ್ತೂರು: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ಚೂರಿ ತೋರಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ಆರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುರುಷರಕಟ್ಟೆಯಲ್ಲಿ ನಡೆದಿದೆ. ಯುವತಿ ತನ್ನ ಸ್ಕೂಟಿಯನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಕೆಲವರು ಚೂರಿ ತೋರಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಭಯಗೊಂಡ ಯುವತಿ ಆಟೋರಿಕ್ಷಾದಲ್ಲಿ ಪುತ್ತೂರಿಗೆ ತೆರಳಿದರೂ, ಥಾರ್ ಕಾರಿನಲ್ಲಿ ಬೆನ್ನಟ್ಟಿಕೊಂಡು ಬಂದು ಮತ್ತೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಯುವತಿಯ ದೂರಿನ ಮೇರೆಗೆ ಪೊಲೀಸರು ಆರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *