Breaking News

ಸರ್ಕಾರಿ ಕಾಲೇಜು ಆಡಿಟ್‌ಗೆ ಲಂಚ ಸ್ವೀಕಾರ: ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಇಬ್ಬರು ಆಡಿಟರ್‌ಗಳು!

ಬೈಂದೂರು: ಸರ್ಕಾರಿ ಕಾಲೇಜಿನ ಆಡಿಟ್ ವರದಿ ಸುಗಮವಾಗಿ ಮಾಡಿಕೊಡುವುದಾಗಿ ಹೇಳಿ ₹1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಆಡಿಟರ್‌ಗಳನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ. ಬೆಂಗಳೂರಿನ ಆಡಿಟರ್‌ಗಳಾದ ರಘುನಂದನ್ ಮತ್ತು ಶ್ರೀಧರ್, ಅಂಕೋಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಂದ ₹30 ಸಾವಿರ ಮುಂಗಡ ಪಡೆದು, ಉಳಿದ ₹70 ಸಾವಿರವನ್ನು ಬೈಂದೂರು ಕಾಲೇಜಿಗೆ ತಂದು ನೀಡುವಂತೆ ಸೂಚಿಸಿದ್ದರು. ಇದರಿಂದ ಪ್ರಾಂಶುಪಾಲರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಬೈಂದೂರು ಸರ್ಕಾರಿ ಕಾಲೇಜಿನಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನೂ ಬಂಧಿಸಿ, ಹಣವನ್ನು ವಶಪಡಿಸಿಕೊಂಡಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *