Breaking News

ಬ್ಲ್ಯಾಕ್‌ಮೇಲ್: ಆರೋಪಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಉಡುಪಿ: ಉದ್ಯಮಿಗೆ ಬ್ಲ್ಯಾಕ್‌ಮೇಲ್ ಪ್ರಕರಣದಲ್ಲಿ ಬಂಧಿತಳಾಗಿರುವ ಪಡುಬಿದ್ರೆಯ ಜೀನತ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ. 50 ಲಕ್ಷ ರೂ. ತುರ್ತು ಅಗತ್ಯವಿದೆ ಎಂದು ನಂಬಿಸಿ ಮೋಹಿನಿ ಶೆಟ್ಟಿಗಾರ್ ಅವರಿಂದ 148 ಗ್ರಾಂ ಚಿನ್ನ ಪಡೆದು ಅಡವಿಟ್ಟಿರುವ ಆರೋಪ ಕೇಳಿಬಂದಿದೆ. 2020ರಲ್ಲಿ ಪಡೆದ ಚಿನ್ನವನ್ನು ಸುಧೀಂದ್ರ ಫೈನಾನ್ಸ್‌ನಲ್ಲಿ ಅಡವಿಟ್ಟು 4.36 ಲಕ್ಷ ರೂ. ಸಾಲ ಪಡೆದಿದ್ದ ಜೀನತ್, ಆರಂಭದಲ್ಲಿ ಸಾಲದ ಕಂತುಗಳನ್ನು ಪಾವತಿಸಿದ್ದರೂ ಬಳಿಕ ನಿಲ್ಲಿಸಿ ಚಿನ್ನವನ್ನು ಹಿಂದಿರುಗಿಸಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಚಿನ್ನದ ಬಗ್ಗೆ ಕೇಳಲು ಹೋದಾಗ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮೋಹಿನಿ ಆರೋಪಿಸಿದ್ದಾರೆ. ಈ ದೂರಿನ ಮೇರೆಗೆ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದ್ದು, ಜೀನತ್ ಈಗಾಗಲೇ ಬ್ಲ್ಯಾಕ್‌ಮೇಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *