Breaking News

10 ಲಕ್ಷ ರೂ. ಸಾಲ ಪಡೆದು ವಾಪಾಸ್ಸು ನೀಡದೆ ವಂಚನೆ: ಪ್ರಕರಣ ದಾಖಲು

ಉಡುಪಿ: ಉದ್ಯೋಗದ ಪರಿಚಯದ ಮೂಲಕ ನಂಬಿಕೆ ಗಳಿಸಿ 10 ಲಕ್ಷ ರೂ. ಸಾಲ ಪಡೆದು ವಾಪಸ್ ನೀಡದೇ ವಂಚಿಸಿರುವ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂಬಲಪಾಡಿಯ ಸಜ್ಜನ್ ಶೆಟ್ಟಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸಿದ್ದಾರ್ಥ ಶೆಟ್ಟಿ ಹಾಗೂ ಆತನ ಕುಟುಂಬದ ಸದಸ್ಯರಾದ ಅಮರನಾಥ್ ಶೆಟ್ಟಿ, ಚಂದ್ರಕಲಾ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಪ್ರಜ್ವಲ್ ಶೆಟ್ಟಿ ಮತ್ತು ಸದಾಶಿವ ಶೆಟ್ಟಿ, ಐದು ತಿಂಗಳಲ್ಲಿ ಹಣ ಮರಳಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡಿದ್ದರು ಎನ್ನಲಾಗಿದೆ. ಬಳಿಕ ಹಣ ಕೇಳಿದಾಗ ವಿವಿಧ ಕಾರಣ ಹೇಳಿ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಗಳು ನೀಡಿದ ಚೆಕ್ ಕೂಡ ಬೌನ್ಸ್ ಆಗಿದೆ. ಈ ಬಗ್ಗೆ ಪ್ರಶ್ನಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದು, ವಂಚನೆ ನಡೆಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *