Breaking News

ಆಸ್ತಿ ಪಾಲು ಕೇಳಿದ್ದಕ್ಕೆ ಹೆತ್ತ ಮಗಳ ಮೇಲೆಯೇ ತಂದೆಯಿಂದ ಭೀಕರ ಹಲ್ಲೆ!

ಬೆಂಗಳೂರು: ಆಸ್ತಿಯಲ್ಲಿ ಪಾಲು ಕೇಳಿದ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ಸ್ವಂತ ತಂದೆ ಹಾಗೂ ಕುಟುಂಬಸ್ಥರೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಚ್ಚಹಳ್ಳಿಯಲ್ಲಿ ನಡೆದಿದೆ. ಗಾಯಾಳು ಲಕ್ಷ್ಮಮ್ಮ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾನಸಿಕ ಅಸ್ವಸ್ಥನೊಂದಿಗೆ ಮದುವೆಯಾಗಿದ್ದ ಲಕ್ಷ್ಮಮ್ಮ, ಇಬ್ಬರು ಮಕ್ಕಳೊಂದಿಗೆ ತವರು ಮನೆಗೆ ಬಂದರೂ ಕುಟುಂಬಸ್ಥರು ಮನೆಯೊಳಗೆ ಸೇರಿಸದೆ, ಕಳೆದ ನಾಲ್ಕು ತಿಂಗಳಿಂದ ಮನೆಯ ಕಾಂಪೌಂಡ್‌ನಲ್ಲೇ ವಾಸಿಸುತ್ತಿದ್ದರು. ಬಳಿಕ ಆಸ್ತಿಯಲ್ಲಿ ತನ್ನ ಪಾಲು ನೀಡುವಂತೆ ಕೇಳಿದ್ದಕ್ಕೆ ತಂದೆ ಮುನಿಚಿನ್ನಪ್ಪ, ತಮ್ಮ ಮಾರಪ್ಪ ಹಾಗೂ ಅಶ್ವಿನಿ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ವಿಶ್ವನಾಥಪುರ ಪೊಲೀಸರು ತನಿಖೆ ಆರಂಭಿಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *