ಬೆಂಗಳೂರು: ಮನೆಗಳನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಇಬ್ಬರು ಮಹಿಳೆಯರನ್ನು ಬಂಧಿಸಿ, ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಜುಲೈ 3ರಂದು ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಕೆ. ಹಳ್ಳಿ 2ನೇ ಮುಖ್ಯರಸ್ತೆ ಹಾಗೂ ಗೋವಿಂದರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್.ವಿ.ಜಿ. ನಗರದ ಬಂಡೆ ಗಣಪತಿ ದೇವಸ್ಥಾನದ ಸಮೀಪದ ಮನೆಗಳಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಮಹಿಳಾ ಸಂರಕ್ಷಣಾ ದಳ ದಾಳಿ ನಡೆಸಿತು. ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದು, ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿತರು ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ದೂರವಾಣಿ ಮೂಲಕ ಗ್ರಾಹಕರನ್ನು ಸಂಪರ್ಕಿಸಿ, ಬಾಡಿಗೆ ಮನೆಗಳಿಗೆ ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ತಪ್ಪೊಪ್ಪಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

