ಬೆಂಗಳೂರು: ಯಶವಂತಪುರ-ತುಮಕೂರು ರಸ್ತೆಯಲ್ಲಿ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಬೈಕ್‌ಗಳಲ್ಲಿ ವ್ಹೀಲಿಂಗ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿ, ಐವರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಯಶವಂತಪುರ ನಿವಾಸಿ ಹಾಗೂ ಮೆಕ್ಯಾನಿಕ್ ಸಾದೀಕ್ ಪಾಷ (21) ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಬಳಸಿದ್ದ ಮೂರು ಬೈಕ್‌ಗಳನ್ನು ಜಪ್ತಿ ಮಾಡಲಾಗಿದ್ದು, ಅಪ್ರಾಪ್ತರ ಪೋಷಕರ ವಿರುದ್ಧವೂ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಜುಲೈ 4ರ ರಾತ್ರಿ ಯಶವಂತಪುರದಲ್ಲಿ ಮೂರು ಬೈಕ್‌ಗಳಲ್ಲಿ ಬಂದಿದ್ದ ಆರು ಮಂದಿ, ಸೈರನ್ ಹಾಕಿಕೊಂಡು ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವ್ಹೀಲಿಂಗ್ ಮಾಡಿ ಕೆಲಕಾಲ ಅಡ್ಡಿಪಡಿಸಿದ್ದರು. ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

