ತುಮಕೂರು: ಚಿಕ್ಕನಾಯಕನಹಳ್ಳಿ ಪೊಲೀಸರು ಖೋಟಾ ನೋಟು ಜಾಲವನ್ನು ಭೇದಿಸಿ, ಕಿಂಗ್‌ಪಿನ್ ರುದ್ರೇಶ್ ಸೇರಿ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹500 ಮುಖಬೆಲೆಯ 60ಕ್ಕೂ ಹೆಚ್ಚು ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 2ರಂದು ಹುಳಿಯಾರಿನ ಅಂಗಡಿಯಲ್ಲಿ ₹500ರ ನಕಲಿ ನೋಟು ಚಲಾವಣೆಯಾದ ಪ್ರಕರಣದ ಸುಳಿವಿನ ಆಧಾರದಲ್ಲಿ ತನಿಖೆ ಆರಂಭಿಸಿದ ಪೊಲೀಸರು, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬೆಂಗಳೂರಿನಲ್ಲಿ ನಕಲಿ ನೋಟು ಮುದ್ರಿಸಿ, ಮೈಸೂರಿನಲ್ಲಿ ಮಾರಾಟ ಮಾಡಲಾಗುತ್ತಿತ್ತು ಎಂಬುದು ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

